August 20, 2026

ಮಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ:
ಸಿಎಂ ಇದ್ದ ಹೋಟೆಲ್ ಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

0
image_editor_output_image1236126072-1649766198799

ಮಂಗಳೂರು: ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆಯನ್ನು ಖಂಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದ ಮಂಗಳೂರು ನಗರದ ಖಾಸಗಿ ಹೊಟೇಲ್ ಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.

ಮಂಗಳೂರಿನ ಓಷಿಯನ್ ಪರ್ಲ್ ಹೊಟೇಲ್ ಗೆ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಲು ಯತ್ನಿಸಿದರು. ಈಶ್ವರಪ್ಪ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

Leave a Reply

Your email address will not be published. Required fields are marked *

You may have missed

error: Content is protected !!