ಮೆಹಬೂಬಾ ಮುಫ್ತಿಗೆ ಮತ್ತೆ ಗೃಹಬಂಧನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರನ್ನು ಅನಂತ್‌ನಾಗ್ ಜಿಲ್ಲೆಗೆ ಹೋಗದಂತೆ ತಡೆಯುವ ಸಲುವಾಗಿ ಮಂಗಳವಾರ ಗೃಹಬಂಧನದಲ್ಲಿ ಇರಿಸಲಾಗಿದೆ.
ನಾನು ಏ.6ರಂದು ಅನಂತ್‌ನಾಗ್ ಜಿಲ್ಲೆಯಲ್ಲಿ ಹಲ್ಲೆಗೊಳಗಾದ ಕಾಶ್ಮೀರಿ ಪಂಡಿತರ ಮನೆಗೆ ಭೇಟಿ ನೀಡುವವಳಿದ್ದೆ. ಅಲ್ಲಿಗೆ ನಾನು ಭೇಟಿ ನೀಡಬಾರದು, ಸತ್ಯ ಹೊರಬರಬಾರದು ಎಂಬ ಕಾರಣಕ್ಕೆ ಸರ್ಕಾರ ನನ್ನನ್ನು ಗೃಹಬಂಧನದಲ್ಲಿ ಇರಿಸಿದೆ’ ಎಂದು ಅವರು ಟ್ವಿಟರ್‌ನಲ್ಲಿ ದೂರಿದ್ದಾರೆ.




