August 20, 2026

ಪಿಸ್ತೂಲ್ ಇಟ್ಟುಕೊಂಡು ಓಡಾಡುತ್ತಿದ್ದ ಶಿಕ್ಷಕಿಯ ಬಂಧನ

0
image_editor_output_image1165854666-1649833855833.jpg

ಲಕ್ನೋ: ದೇಶೀ ನಿರ್ಮಿತ ಪಿಸ್ತೂಲ್ ಇಟ್ಟುಕೊಂಡು ಓಡಾಡುತ್ತಿದ್ದ ಶಿಕ್ಷಕಿಯನ್ನು ಬಂಧಿಸಿರುವ ಘಟನೆ ಮಂಗಳವಾರ ಉತ್ತರಪ್ರದೇಶದ ಮೈನ್ ಪುರಿಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಶಿಕ್ಷಕಿಯನ್ನು ಫಿರೋಜಾಬಾದ್ ಶಾಲೆಯ ಕರೀಶ್ಮಾ ಸಿಂಗ್ ಯಾದವ್ ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ಆಕೆ ಮಂಗಳವಾರ ಮೈನ್ ಪುರಿಗೆ ತೆರಳಿದ್ದಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಗರದ ಕೋಟ್ವಾಲಿ ಪ್ರದೇಶದಲ್ಲಿ ಮಹಿಳೆಯೊಬ್ಬಳು ಪಿಸ್ತೂಲ್ ಹಿಡಿದು ಓಡಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಂತರ ಆಕೆಯನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!