February 2, 2026

ಕಾರ್ಕಳ: ಕೈಕಾಲು ಮುರಿದು ಹಿಂಸಾತ್ಮಕ ರೀತಿಯಲ್ಲಿ ದನಗಳ ಸಾಗಾಟ: ವಾಹನ ಸೇರಿ 14 ಗೋವುಗಳ ರಕ್ಷಣೆ

0
image_editor_output_image1914253436-1649839443951.png

ಕಾರ್ಕಳ: ಗೋಕಳ್ಳತನದಲ್ಲಿ ಸಕ್ರಿಯವಾಗಿದ್ದ ತಂಡವನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ್ದ ಘಟನೆ ಹೆಬ್ರಿಯ ಬ್ಯಾಣ ಪರಿಸರದಲ್ಲಿ ನಡೆದಿದೆ.

ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಮುರಿದು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆಬ್ರಿ ಇನ್ಸ್ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಗೋ ಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನವನ್ನು ಸ್ಥಳದಲ್ಲೇ ಬಿಟ್ಟು ಗೋ ಕಳ್ಳರು ಪರಾರಿಯಾಗಿದ್ದಾರೆ.

ಪರಾರಿಯಾದ ಗೋ ಕಳ್ಳರನ್ನು ಮಂಗಳೂರು ಮೂಲದವರೆಂದು ಶಂಕಿಸಲಾಗಿದೆ. ಇನ್ನು ರಕ್ಷಿಸಲ್ಪಟ್ಟ ಜಾನುವಾರುಗಳ ಪೈಕಿ ಒಂದು ಜಾನುವಾರು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ ಗೋವುಗಳಿಗೆ ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!