ಸ್ಥಗಿತಗೊಂಡಿದ್ದ ‘ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ
ಬೆಳಗಾವಿ: ಕೋವಿಡ್ ಸಾಂಕ್ರಾಮಿಕದಿಂದಾಗಿ ಸ್ಥಗಿತಗೊಂಡಿದ್ದ ಕರ್ನಾಟಕ ಸರ್ಕಾರದ ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಸ್ವತಃ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದು, ‘ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ 2 ವರ್ಷಗಳಿಂದ ಸ್ಥಗಿತಗೊಂಡಿದ್ದ, ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಸಪ್ತಪದಿ’–ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಪುನರಾರಂಭಗೊಳಿಸಲು ಆದೇಶ ಹೊರಡಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.




