August 20, 2026

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಧಾರ್ಮಿಕ ಸಭೆಯಲ್ಲಿ ಭಾಗಿಯಾಗದಂತೆ ನಿರ್ಬಂಧ ಹೇರಿದ ಉಡುಪಿ‌ ಜಿಲ್ಲಾಡಳಿತ

0
Screenshot_2022-04-14-05-02-05-40_680d03679600f7af0b4c700c6b270fe7.jpg

ಉಡುಪಿ : ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಏಪ್ರಿಲ್ 15 ರಂದು ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಭಾಗಿಯಾಗದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಏಪ್ರಿಲ್ 15 ರಂದು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮುತಾಲಿಕ್ ಅವರು ಭಾಗಿಯಾಗುವುದು ನಿಗದಿಯಾಗಿತ್ತು.

ಕೋಮು ಸೂಕ್ಷ ಗಂಗೊಳ್ಳಿಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದರೆ ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಉಡುಪಿ ಜಿಲ್ಲಾದ್ಯಂತ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!