March 20, 2026

ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದುಬಿದ್ದು ಮೃತ್ಯು

0
Screenshot_2022-04-15-04-34-57-18_680d03679600f7af0b4c700c6b270fe7.jpg

ಬೆಳಗಾವಿ: ಪಟ್ಟಣದ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಗುರುವಾರ ನಡೆಯುತ್ತಿದ್ದ ಭಗವಾನ್‌ ಮಹಾವೀರ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ, ಸಂಸ್ಥೆಯ ಕಾರ್ಯದರ್ಶಿ ವಿಠ್ಠಲ ಎಚ್. ಪವಾರ (88) ಅವರು ಕುಸಿದುಬಿದ್ದು ಮೃತಪಟ್ಟರು.

ಅಧ್ಯಕ್ಷ ಭಾಷಣ ಮಾಡುವಾಗ ಕುಸಿದು ಬಿದ್ದರು. ಪವಾರ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.

Leave a Reply

Your email address will not be published. Required fields are marked *

error: Content is protected !!