ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಆಲಿಯಾ ಭಟ್, ರಣಬೀರ್ ಕಪೂರ್
ಮುಂಬೈ: ಬಾಲಿವುಡ್‌ನ ಕ್ಯೂಟ್ ಜೋಡಿ ಎಂದೇ ಹೆಸರಾಗಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ನವ ದಂಪತಿಗೆ ಬಾಲಿವುಡ್ ನಟ –ನಟಿಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದ್ದಾರೆ.
ಆಲಿಯಾ ಭಟ್, ರಣಬೀರ್ ಕಪೂರ್ ಅವರಿಗೆ ‘ಜೀವಮಾನದ ಪ್ರೀತಿ ಮತ್ತು ಸಂತೋಷ’ ಎಂದು ಪ್ರಿಯಾಂಕಾ ಚೋಪ್ರಾ ಶುಭ ಹಾರೈಸಿದ್ದಾರೆ.




