March 19, 2026

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ಗೆ ಬೆಂಕಿ

0
Screenshot_2022-04-15-14-34-44-15_680d03679600f7af0b4c700c6b270fe7.jpg

ಹೊಸದಿಲ್ಲಿ: ದಿಬ್ರುಗಢ-ದೆಹಲಿ ನಡುವೆ ಸಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ಗೆ ಬೆಂಕಿ ಹತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಕ್ಯಾಬಿನ್ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿ ನಂದಿಸಿದ್ದಾರೆ ಎಂದು ವಾಯುಯಾನ ನಿಯಂತ್ರಕ ಡಿಜಿಸಿಎ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಿಂದಾಗಿ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.

6ಇ 2037 ವಿಮಾನ ಅಸ್ಸಾಂನ ದಿಬ್ರುಗಢ್‌ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರೊಬ್ಬರ ಫೋನ್‌ ನಿಂದ ಬೆಂಕಿ ಕಿಡಿ ಮತ್ತು ಹೊಗೆ ಹೊರಬರುವುದನ್ನು ಕಂಡಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಗಳು ಹೇಳಿದರು.

Leave a Reply

Your email address will not be published. Required fields are marked *

error: Content is protected !!