ಕೇರಳದ ಪಾಲಕ್ಕಾಡ್ ನಲ್ಲಿ ಆರೆಸ್ಸೆಸ್ ನ ಮುಖಂಡನ ಹತ್ಯೆ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಆರೆಸ್ಸೆಸ್ ನ ಮುಖಂಡರೋರ್ವರನ್ನು ಹತ್ಯೆಗೈದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ.
ಕೊಲೆಗೀಡಾದ ವ್ಯಕ್ತಿಯನ್ನು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಬಂದ 5 ಮಂದಿ ಅಪರಿಚಿತರ ತಂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸನ್ ಅವರನ್ನು ಆಸ್ಪತ್ರಗೆ ದಾಖಲಿಸಿದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.
ಶುಕ್ರವಾರ ಪಾಲಕ್ಕಾಡ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಝುಬೈರ್ ಎಂಬವರ ಹತ್ಯೆ ನಡೆದಿತ್ತು.




