February 3, 2026

ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ: ಮೂವರು ಗಂಭೀರ

0
image_editor_output_image546394249-1650175598860.jpg

ಕಲಬುರ್ಗಿ: ಹುಮನಾಬಾದ್ ರಿಂಗ್ ರಸ್ತೆಯ ಹೊರವಲಯದಲ್ಲಿ ಖಾಸಗಿ ಬಸ್ ಹಾಗೂ ಸಿಮೆಂಟ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದರೇ, ಹಲವರು ಗಾಯಗೊಂಡಿರೋ ಘಟನೆ ನಡೆದಿದೆ.

ಕಲಬುರ್ಗಿಯ ಹುಮನಾಬಾದ್ ಕಡೆಯಿಂದ ಬರುತ್ತಿದ್ದಂತ ಖಾಸಗಿ ಬಸ್ ಹಾಗೂ ಟ್ಯಾಂಕರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ವಾಹನಗಳು ಪಲ್ಟಿಯಾದ ಪರಿಣಾಮ, ಮೂವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿ ತಲುಪಿದ್ದಾರೆ. ಅಲ್ಲದೇ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ.

ಇನ್ನೂ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹುಮನಾಬಾದ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!