February 3, 2026

ಹುಬ್ಬಳ್ಳಿ ಉದ್ವಿಗ್ನ ಪರಿಸ್ಥಿತಿ:
ಕೋಮು ಪ್ರಚೋದನಾಕಾರಿ ಹಾಕಿದ ಆರೋಪಿ ಅಭಿಷೇಕ್ ಬಂಧನ

0
image_editor_output_image567635232-1650176958745.jpg

ಹುಬ್ಬಳ್ಳಿ: ಷೇಕ್ ಹೀರೆಮಠ ಎಂಬ ಯುವಕನೊಬ್ಬ ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ಹಾರುವಂತೆ ಚಿತ್ರವನ್ನು ಎಡಿಟ್ ಮಾಡಿ, ಕೋಮು ಪ್ರಚೋದನಾಕಾರಿ ಹೇಳಿಕೆಯೊಂದಿಗೆ ಹಂಚಿಕೊಂಡಿದ್ದರ ಪರಿಣಾಮ ಹುಬ್ಬಳ್ಳಿಯಲ್ಲಿ ಕೋಮು ಉದ್ವಿಗ್ವ ಪರಿಸ್ಥಿತಿ ಉಂಟಾಗಿದೆ.

ಈ ಸಂಬಂಧ ಶನಿವಾರ ತಡರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಮುಸ್ಲಿಂ ಜನಸಮೂಹ ಬೃಹತ್ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರೊಂದಿಗೆ ವಾಗ್ವಾದ ನಡೆದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ನಗರದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಆರೋಪಿಯು ಮಸೀದಿಯ ಚಿತ್ರದ ಮೇಲೆ ಕೇಸರಿ ಧ್ವಜ ಹಾಕಿದ್ದಲ್ಲದೆ “ತಲೆ ಕೆಟ್ಟರೆ ಇಲ್ಲಿಯೂ ಭಗವಧ್ವಜ ಹಾರಿಸುವೆ, ಜೈ ಶ್ರೀರಾಮ್, ಜೈ ಹಿಂದೂ ಸಾಮ್ರಾಟ್” ಎಂದು ಬರೆದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಎನ್ನಲಾಗಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಆರೋಪಿ ಅಭಿಷೇಕ್ ಹೀರೆಮಠನನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!