February 2, 2026

ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ‌ ಹತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

0
Screenshot_2022-04-18-14-37-18-70_680d03679600f7af0b4c700c6b270fe7.jpg

ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ‌ ಹತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

ಬೆಂಗಳೂರು ಮೂಲದ ಇಂಜಿನಿಯರಿಂಗ್ ಕಾಲೇಜಿನಿಂದ ಪ್ರವಾಸಕ್ಕೆಂದು ಬಂದಿದ್ದ ತಂಡದಲ್ಲಿದ್ದ ವಿದ್ಯಾರ್ಥಿಗಳು ಸಮುದ್ರ ತಟದಲ್ಲಿರುವ ಕಲ್ಲುಗಳ ಮೇಲೆ ಸೆಲ್ಫಿ ತೆಗೆಯಲು ಹತ್ತಿದ್ದರು. ಈ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೃತ ಪಟ್ಟವರಲ್ಲಿ ಒರ್ವನ‌ಮೃತ ದೇಹ ಸಮುದ್ರದಿಂದ ಮೆಲಕ್ಕೆತ್ತಲಾಗಿದ್ದು,ಇನ್ನೋರ್ವನ‌ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ. ಮ್ರತಪಟ್ಟ ಇಬ್ಬರೂ ವಿದ್ಯಾರ್ಥಿಗಳ ಹೆಸರು ಸತೀಶ್ ಎಂದು ತಿಳಿದುಬಂದಿದೆ.

ಮಲ್ಪೆ ಪೊಲೀಸರು ದ್ವೀಪಕ್ಕೆ ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ದ್ವೀಪದಲ್ಲಿ ಕೇರಳದ ಮೂರು ಮಂದಿ ವಿದ್ಯಾರ್ಥಿಗಳು ಸಮುದ್ರದ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದರು‌.

Leave a Reply

Your email address will not be published. Required fields are marked *

error: Content is protected !!