ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯ ಪತಿಯ ಬಂಧನ
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕುರಿತಂತೆ ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೇಲೆ ಸೋಮವಾರ ಮತ್ತೆ ದಾಳಿ ಮಾಡಿದ ಸಿಐಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಶಾಲೆಯ ಮುಖ್ಯಸ್ಥೆ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಪತಿ ರಾಜೇಶ ಅವರನ್ನು ಅಧಿಕಾರಿಗಳು ಭಾನುವಾರ ತಡರಾತ್ರಿ ಬಂಧಿಸಿದ್ದು, ಅವರ ವಾಹನ ವಶಪಡಿಸಿಕೊಂಡಿದ್ದಾರೆ.
ಇವರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ. ಈಗಾಗಲೇ ಬಂಧಿತರಾಗಿರುವ ಮೂವರು ಅಭ್ಯರ್ಥಿಗಳು ಹಾಗೂ ಪರೀಕ್ಷೆ ಮೇಲ್ವಿಚಾರಕಿಯರಾಗಿ ಕಾರ್ಯನಿರ್ವಹಿಸಿದ್ದ ಮೂವರು ಶಿಕ್ಷಕಿಯರನ್ನು ಸ್ಥಳಕ್ಕೆ ಕರೆತಂದು, ವಿಚಾರಣೆ ನಡೆಸಿದರು. ದಿವ್ಯಾ ಅವರ ಮನೆ ಮೇಲೆ ಭಾನುವಾರ ದಾಳಿ ನಡೆದಿತ್ತು.




