ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಜಾನುವಾರುಗಳ ಸಾಗಾಟ ಸಂಬಂಧಿಸಿದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020’ರ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಆದರೆ ಈ ಅನುಮತಿಯು, ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.
ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು.




