March 24, 2026

ಬುಡೋಳಿ: ಖಾಸಗಿ ಬಸ್, ಲಾರಿ, ಕಾರು ನಡುವೆ ಸರಣಿ ಅಪಘಾತ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬ್ಲಾಕ್

0
IMG-20220419-WA0015

ವಿಟ್ಲ: ಮಂಗಳೂರು- ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ.

6 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿತ್ತು.‌ಬಳಿಕ ಸಾರ್ವಜನಿಕರು ಸುಗಮ ಸಂಚಾರಕ್ಕೆ ಮಾಡಲು ಕಾರ್ಯಾಚರಣೆ ನಡೆಸಿದರು. ಬೆಳಿಗ್ಗೆ 9.30ರ ವೇಳೆಗೆ ಸುಗಮ ಸಂಚಾರ ಸಾಧ್ಯವಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!