February 1, 2026

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರ

0
Screenshot_20220419-171913_Chrome.jpg

ಬೆಳಗಾವಿ: ಇತ್ತೀಚೆಗೆ ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂ. ಪರಿಹಾರವನ್ನು ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳಗಾವಿ ತಾಲೂಕಿನ ಬಡಸ ಕೆ.ಎಚ್. ಗ್ರಾಮದಲ್ಲಿ ‌ಮಂಗಳವಾರ ಪರಿಹಾರ ಹಸ್ತಾಂತರಿಸಲಾಯಿತು.

ಸಂತೋಷ್ ಪತ್ನಿ ಜಯಶ್ರೀ ಹಾಗೂ ತಾಯಿ ಪಾರ್ವತಿ ಪಾಟೀಲ್ ಅವರಿಗೆ ಚೆಕ್ ಹಸ್ತಾಂತರಿಸಲಾಯಿತು. ಚಿಕ್ಕೋಡಿಯ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರೂ.ಗಳನ್ನು ಈ ವೇಳೆ ಹಸ್ತಾಂತರಿಸಿದರು.

ಈ ವೇಳೆ ಸಂತೋಷ್ ತಾಯಿ ಪಾರ್ವತಿ ಮಾತನಾಡಿ, ಮಗನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಸಂತೋಷ್ ಸಾವಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್‍ ಭರವಸೆ ನೀಡಿದರು.
ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕೌಜಲಗಿ, ಡಾ. ಅಂಜಲಿ ನಿಂಬಾಳ್ಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಮುಖಂಡ ಫಿರೋಜ್ ಸೇಠ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!