February 2, 2026

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಯಾವುದೇ ಅಮಾಯಕರ ಬಂಧನವಾಗಿಲ್ಲ: ಬಸವರಾಜ ಬೊಮ್ಮಾಯಿ

0
BASAVARAJ-1.jpeg

ಚಿಕ್ಕಮಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಮಾಯಕರ ಬಂಧನವಾಗಿಲ್ಲ. ಎಲ್ಲಾ ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡೇ ಪೊಲೀಸರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಶೃಂಗೇರಿ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಅದರಲ್ಲೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪ ನಿರಾಧಾರ. ಅಮಾಯಕರ ಬಂಧನ ನಡೆದಿಲ್ಲ. ಅಲ್ಲದೆ, ಕಾಂಗ್ರೆಸ್ ಮುಖಂಡನ ಹತ್ಯೆಗೆ ಪ್ರಚೋದನೆ ನೀಡಿರುವ ವೈರಲ್ ವೀಡಿಯೋದ ಕುರಿತು ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ವಿರೋಧ ಪಕ್ಷದವರ ಹೇಳಿಕೆಗಳು ಮುಖ್ಯವಲ್ಲ. ಜನರ ಹೇಳಿಕೆಗಳೇ ಮುಖ್ಯ. ರಾಮರಾಜ್ಯವನ್ನು ರಾವಣ ರಾಜ್ಯ ಮಾಡುತ್ತಿದ್ದಾರೆ ಎಂಬುದು ವಿಪಕ್ಷಗಳ ವ್ಯಾಖ್ಯಾನ. ಅದಕ್ಕೆಲ್ಲ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಹುಬ್ಬಳ್ಳಿ, ಶಿವಮೊಗ್ಗ ಘಟನೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಸಂತೋಷ್ ಪಾಟೀಲ್ ಪ್ರಕರಣದಲ್ಲಿಯೂ ಎಫ್‌ಐಆರ್ ದಾಖಲಾಗಿದೆ. ಧಾರವಾಡ ಕಲ್ಲಂಗಡಿ ಅಂಗಡಿಗಳ ಹಾನಿ ಪ್ರಕರಣದಲ್ಲಿಯೂ ಕ್ರಮ ವಹಿಸಲಾಗಿದೆ. ಯಾವುದೇ ಘಟನೆಯಲ್ಲಿ ವಿಳಂಬ ಧೋರಣೆ ಅನುಸರಿಸಿಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!