February 2, 2026

ಉಡುಪಿ: ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಕಾಮುಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

0
IMG-20220419-WA0017.jpg

ಉಡುಪಿ: ಕಾಲೇಜು ಬಿಟ್ಟು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ನಡು ರಸ್ತೆಯಲ್ಲೇ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಕಾಮುಕನಿಗೆ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಪುರಭವನದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ನೀಲ್‌ ಗಾಮಾ ಎಂಬ ಯುವಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಯುವತಿ ಬೊಬ್ಬೆ ಹಾಕಿದ್ದು ಸ್ಥಳೀಯರು ಯುವಕನನ್ನು ಹಿಡಿದು ಚೆನ್ನಾಗಿ ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರನ್ನು ಕರೆಸಿ ಜೀಪು ಹತ್ತಿಸಿದ್ದಾರೆ. ಆರೋಪಿಯನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು ಯುವತಿ ದೂರಿನಂತೆ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!