ಗುಡಿಸಲಿನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 7 ಮಂದಿ ಸಜೀವ ದಹನ
ಲುಧಿಯಾನ: ಪಂಜಾಬ್‌ನ ಲುಧಿಯಾನ ಬಳಿ ಗುಡಿಸಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ವಲಸೆ ಕಾರ್ಮಿಕರಾಗಿದ್ದು, ಇಲ್ಲಿನ ಟಿಬ್ಬಾ ರಸ್ತೆಯಲ್ಲಿರುವ ಪಾಲಿಕೆಯ ಕಸದ ಡಂಪಿಂಗ್ ಯಾರ್ಡ್ ಬಳಿಯ ತಮ್ಮ ಗುಡಿಸಲಿನಲ್ಲಿ ಮಲಗಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ ಎಂದು ಲುಧಿಯಾನ ಎಸಿಪಿ (ಪೂರ್ವ) ಸುರೀಂದರ್ ಸಿಂಗ್ ಹೇಳಿದ್ದಾರೆ.
ದಂಪತಿ ಮತ್ತು ಅವರ ಐದು ಮಕ್ಕಳು ಮೃತಪಟ್ಟಿದ್ದಾರೆ ಎಂದು ಟಿಬ್ಬಾ ಪೊಲೀಸ್ ಠಾಣೆಯ ಠಾಣಾಧಿಕಾರಿ ರಣಬೀರ್ ಸಿಂಗ್ ಹೇಳಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.




