ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಾಮನಿರ್ದೇಶಿತ ಕೌನ್ಸಿಲರ್‌ಗಳಿಗೆ ಮತ ಚಲಾಯಿಸುವ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ಸೆಕ್ಷನ್ 42(2) ರ ಅಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಕೌನ್ಸಿಲರ್‌ಗಳು ಪೌರಾಡಳಿತ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ನಾಮನಿರ್ದೇಶಿತ ಕೌನ್ಸಿಲರ್‌ಗಳು ಅಧ್ಯಕ್ಷ ಅಥವಾ ಉಪಾಧ್ಯಕ್ಷ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರು ಎಂದು ಘೋಷಿಸುವಂತೆ ಕೋರಿ ಕೋಲಾರದ ಮಾಲೂರು ಪುರಸಭೆಯ ನಾಮನಿರ್ದೇಶಿತ ಕೌನ್ಸಿಲರ್‌ಗಳಾದ ಕೆ.ಲಕ್ಷ್ಮೀಕಾಂತ ಮತ್ತು ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.




