ಹುಣಸೂರು: ಬೊಲೆರೊ ವಾಹನ ಮರಕ್ಕೆ ಢಿಕ್ಕಿ, 6 ಮಂದಿ ಸ್ಥಳದಲ್ಲೇ ಮೃತ್ಯು
ಹುಣಸೂರು: ತಾಲ್ಲೂಕಿನ ಕಲ್‌ಬೆಟ್ಟದ ಸಮೀಪ ಬುಧವಾರ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು.
ಅವರು ಹುಣಸೂರಿನಿಂದ ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.




