ನೀಟ್ ಪರೀಕ್ಷೆ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ
ತಮಿಳುನಾಡು: ಪೊಲ್ಲಾಚಿಯ 20 ವರ್ಷದ ವಿದ್ಯಾರ್ಥಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಫೇಲ್ ಆಗುವ ಭಯದಿಂದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಯಮತ್ತೂರು ಜಿಲ್ಲೆಯ ಕಿನಾತುಕಡವು ನಿವಾಸಿ ಕೀರ್ತಿವಾಸನ್ ಅವರನ್ನು ಪೊಲ್ಲಾಚಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಯಮತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕೀರ್ತಿವಾಸನ್ ನಾಲ್ಕನೇ ಬಾರಿಗೆ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷೆಯ ಫಲಿತಾಂಶದ ಭಯದಲ್ಲಿದ್ದರು. ಪರೀಕ್ಷೆಯ ಪತ್ರಿಕೆ ಕಠಿಣವಾಗಿದೆ ಎಂದು ಆತ ತನ್ನ ತಾಯಿಗೆ ಹೇಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
NEET ಫೇಲ್ ಆಗುವ ಭಯದಿಂದ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ಐದನೇ ಪ್ರಕರಣ ಇದಾಗಿದೆ. ಕಿನಾತುಕಡವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವದ ಮರಣೋತ್ತರ ಪರೀಕ್ಷೆಯನ್ನು ಕೊಯಮತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ.