March 20, 2026

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೆಸರು

0
image_editor_output_image1678292536-1650474582051.jpg

ಶಿವಮೊಗ್ಗ: ‘ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೆಸರು ಅಂತಿಮಗೊಳಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ವಿಮಾನ ನಿಲ್ದಾಣ ₹ 386 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಹಲವರ ಹೆಸರು ನಾಮಕರಣ ಮಾಡಲು ಪ್ರಸ್ತಾವ ಬಂದಿದ್ದವು. ನಿಲ್ದಾಣ ನಿರ್ಮಾಣಕ್ಕೆ ಯಡಿಯೂರಪ್ಪ ಅವರು ಶ್ರಮಿಸಿದ್ದಾರೆ. ಹಾಗಾಗಿ, ಅವರ ಹೆಸರು ಅಂತಿಮಗೊಳಿಸಲಾಗಿದೆ. ಸಂಪುಟ ಅನುಮೋದನೆ ನೀಡಿದೆ. ಕೇಂದ್ರದಿಂದಲೂ ಒಪ್ಪಿಗೆ ಸಿಗಲಿದೆ. ರನ್‌ವೇ ಕಾಮಗಾರಿ, ರಾತ್ರಿ ಸಮಯದಲ್ಲೂ ವಿಮಾನ ಇಳಿಯಲು ಸೌಕರ್ಯ ಸೇರಿ ಹಲವು ಕೆಲಸಗಳಿಗೆ ₹60 ಕೋಟಿಯ ಅಗತ್ಯವಿದೆ. ಬಾಕಿ ಹಣ ತಕ್ಷಣ ಬಿಡುಗಡೆ ಮಾಡಲಾಗುವುದು. ಈ ವರ್ಷದ ಅಂತ್ಯದ ಒಳಗೆ ನಿಲ್ದಾಣ ಉದ್ಘಾಟನೆಯಾಗಲಿದೆ’ ಎಂದು ವಿವರ ನೀಡಿದರು.

Leave a Reply

Your email address will not be published. Required fields are marked *

error: Content is protected !!