July 2, 2026

ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಸ್ಫೋಟ: ನಾಲ್ವರು ಸಾವು, 19 ಜನರಿಗೆ ಗಾಯ

0
image_editor_output_image-1210569766-1650496739342.jpg

ಪೋಲೆಂಡ್‌: ದಕ್ಷಿಣ ಪೋಲೆಂಡ್‌ನ ಕಲ್ಲಿದ್ದಲು ಗಣಿಯಲ್ಲಿ ಬುಧವಾರ ಸಂಭವಿಸಿದ ಮೀಥೇನ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು 19 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಎಸ್‌ಡಬ್ಲ್ಯೂ ಕಂಪನಿಯ ಪಾವ್ಲೋವಿಸ್‌ನಲ್ಲಿನ ಗಣಿಯಲ್ಲಿ ಈ ದುರಂತ ಸಂಭವಿಸಿದ್ದು , ಇನ್ನೂ ಏಳು ಮಂದಿ ನಾಪತ್ತೆಯಾಗಿದ್ದಾರೆ. ಘಟನೆ ವೇಳೆ ಗಣಿಯಲ್ಲಿ ಒಂದು ಕಿ.ಮೀ.ವರೆಗೂ ಸ್ಫೋಟದ ಜ್ವಾಲೆ ವ್ಯಾಪಿಸಿದೆ. ಕಾರ್ಯಾಚರಣೆಯ ಸಮಯದಲ್ಲಿ ಏಳು ಮಂದಿ ರಕ್ಷಣಾ ಕಾರ್ಯಾಚರಣೆಯ ಸಿಬ್ಬಂದಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಗಣಿ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಪೋಲೆಂಡ್‌ ಪ್ರಧಾನಿ ಮೊರಾವಿಕಿ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!