February 1, 2026

ಕಲ್ಲಡ್ಕ ಪೇಟೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0
IMG_20220421_181401.jpg

ಬಂಟ್ವಾಳ: ಕಲ್ಲಡ್ಕ ಪೇಟೆಯಲ್ಲಿ ಸುಮಾರು ೫೫ ವರ್ಷದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.

ವ್ಯಕ್ತಿಯು ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಸ್ಥಳೀಯ ವ್ಯಾಪಾರಿಯೊಬ್ಬರು ಮೃತದೇಹವನ್ನು ಕಂಡು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಕುರಿತು ಮಾಹಿತಿ ಸಿಕ್ಕಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಪೊಲೀಸರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!