February 1, 2026

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಶಾಸಕರ ಗನ್‌ ಮ್ಯಾನ್‌ ಹಾಗೂ ಓರ್ವ ಪೊಲೀಸ್‌ ಪೇದೆ ಬಂಧನ

0
handcuff-4-10.jpg

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಶಾಸಕರ ಗನ್‌ ಮ್ಯಾನ್‌ ಹಾಗೂ ಪೊಲೀಸ್‌ ಪೇದೆಯೊಬ್ಬರನ್ನು ಬಂಧಿಸಿದೆ.

545 ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಸಲುವಾಗಿ ಅಫ್ಜಲಪುರ ಶಾಸಕ ಎಂ.ವೈ. ಪಾಟೀಲ್‌ ಅವರ ಗನ್‌ ಮ್ಯಾನ್‌ ರುದ್ರೇಗೌಡ ಎಂಬಾತನನ್ನು ಬಂಧಿಸಲಾಗಿದೆ. ಇದೇ ವೇಳೆ ಕಲಬುರಗಿ ಠಾಣೆಯ ಪೇದೆಯೊಬ್ಬರನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.

ರುದ್ರೇಗೌಡ ಮತ್ತು ಕಲಬುಗರಿ ಪೊಲೀಸ್‌ ಠಾಣೆಯ ಪೇದೆ ಅಕ್ರಮ ಎಸಗಲು ಅಭ್ಯರ್ಥಿಗಳಿಗೆ ನೆರವಾಗಿದ್ದರು ಎಂಬ ಆರೋಪದಡಿ ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ತಲೆ ಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರಿಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ ಅವರು ಈಗಾಗಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!