February 1, 2026

ಅಫ್ಘಾನಿಸ್ತಾನ: ಮಸೀದಿಯಲ್ಲಿ ಸ್ಫೋಟ: ಕನಿಷ್ಠ 10 ಕ್ಕೂ ಹೆಚ್ಚು ಮಂದಿ ಮೃತ್ಯು, ಹಲವರು ಗಾಯ

0
e11f89165c9d439c816561a7b810cd85-e11f89165c9d439c816561a7b810cd85-b5d36a93019a45aeae59d07cabe2bc9b.jpg

ಕಾಬೂಲ್: ಅಫ್ಘಾನಿಸ್ತಾನದ ಮಝಾರ್ ಇ ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ ಘಟನೆ ಗುರುವಾರ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 65 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಅಫ್ಘಾನ್ ನಗರದ ಶಿಯಾ ಪಂಗಡದ ಮಝಾರ್ ಇ ಷರೀಫ್ ಮಸೀದಿ ಮೇಲೆ ಬಾಂಬ್ ದಾಳಿ ನಡೆದಿದೆ. ಸ್ಪೋಟದಲ್ಲಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಾಲಿಬಾನ್ ಕಮಾಂಡರ್ ನ ವಕ್ತಾರ ಮೊಹಮ್ಮದ್ ಅಸೀಫ್ ವಾಝೇರಿ ಹೇಳಿದ್ದಾರೆ. ಬಾಂಬ್ ಸ್ಪೋಟದ ಹೊಣೆಯನ್ನು ತಾಲಿಬಾನ್ ನ ಸ್ಥಳೀಯ ಮುಖಂಡನೊಬ್ಬ ಹೊಣೆ ಹೊತ್ತುಕೊಂಡಿದ್ದಾನೆ ಎನ್ನಲಾಗಿದೆ.

ಗಾಯಾಳುಗಳನ್ನು ಆಂಬುಲೆನ್ಸ್ ಮತ್ತಿತರ ವಾಹನಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಸೀದಿಯಲ್ಲಿ ಮುಸ್ಲಿಮರು ಪವಿತ್ರ ರಂಜಾನ್ ಮಾಸವನ್ನು ಆಚರಿಸುತ್ತಿದ್ದು, ಭಕ್ತರು ಪ್ರಾರ್ಥನೆಗೆ ಕುಳಿತುಕೊಂಡಿದ್ದ ವೇಳೆ ಸ್ಪೋಟ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!