ಹಳೆಯಂಗಡಿ: ಓಮ್ನಿ ಕಾರು ಬಸ್ಸಿಗೆ ಢಿಕ್ಕಿ: ಇಬ್ಬರು ಮೃತ್ಯು
ಹಳೆಯಂಗಡಿ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಾವಂಜೆಯ ಬಳಿಯಲ್ಲಿ ಮಾರುತಿ ಓಮ್ನಿ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ರಾತ್ರಿ 11ಕ್ಕೆ ನಡೆದಿದೆ.
ಸಾವನ್ನಪ್ಪಿದವರನ್ನು ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ ಹಾಗೂ ವಸಂತ್ ಎಂದು ಗುರುತಿಸಲಾಗಿದ್ದು. ಕಾರು ಚಾಲಕ ಬಾಲಕೃಷ್ಣ ಸಹ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಳೆಯಂಗಡಿ ಒಳ ರಸ್ತೆಯಿಂದ ಪಾವಂಜೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವಾಗ ಓಮ್ನಿ ಕಾರು ಮಂಗಳೂರಿನಿಂದ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ಸಿಗೆ ನೇರವಾಗಿ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.




