ಉಡುಪಿ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಿರಾಕರಣೆ: ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ಸಾದ ಇಬ್ಬರು ವಿದ್ಯಾರ್ಥಿನಿಯರು
ಉಡುಪಿ; ಹಿಜಾಬ್ ಗೆ ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ಸಾದ ಇಬ್ಬರು ವಿದ್ಯಾರ್ಥಿನಿಯರು
ಉಡುಪಿ; ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್‌ಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಪರೀಕ್ಷೆ ಬರೆಯದೇ ವಾಪಸ್ ಆದ ಘಟನೆ ಉಡುಪಿಯಲ್ಲಿ ನಡೆದಿದೆ.
ಹಿಜಾಬ್ ಹೋರಾಟಗಾರ್ತಿಯರಾದ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸ್ ಆಗಿದ್ದಾರೆ.
ಶುಕ್ರವಾರ ಉಡುಪಿಯ ವಿದ್ಯೋದಯ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಯರಾದ ಆಲಿಯಾ, ರೇಷಂ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಪಡೆದು ಪ್ರಾಂಶುಪಾಲರನ್ನು ಭೇಟಿಯಾಗಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ತಹಶೀಲ್ದಾರ್ ಸರ್ಕಾರದ ಆದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದ ವಿದ್ಯಾರ್ಥಿನಿಯರು ಮನೆಗೆ ವಾಪಾಸ್ಸು ಹೋಗಿದ್ದಾರೆ.




