ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಮನೆಗೆ ಬೀಗ ಹಾಕಿ ಹೋದ ಪತಿ
ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿಯು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾವೇರಿಪುರದ 13ನೇ ಅಡ್ಡರಸ್ತೆಯ ನಿವಾಸಿ ವನಜಾಕ್ಷಿ (31) ಕೊಲೆಯಾದ ಮಹಿಳೆ.
ಈಕೆ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದು, ಪತಿ ಅಶೋಕ್ ಕಾರು ಚಾಲಕನಾಗಿದ್ದಾನೆ. ಏ.17ರಂದು ಪತ್ನಿ ಮೊಬೈಲ್‌ನಲ್ಲಿ ಮಾತನಾಡುವ ವಿಚಾರಕ್ಕೆ ಜಗಳವಾಗಿದ್ದು, ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಅಶೋಕ್, ಮನೆಗೆ ಹೊರಗಡೆಯಿಂದ ಬೀಗ ಹಾಕಿಕೊಂಡು ಪರಾರಿಯಾಗಿದ್ದ. ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.




