February 4, 2026

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮೇಲೆ ನಿಷೇಧ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

0
NKV-SCI.jpeg

ನವದೆಹಲಿ: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮೇಲೆ ರಾಷ್ಟ್ರವ್ಯಾಪಿ ನಿಷೇಧ ಮತ್ತು ವಾಪಸ್ ಪಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.

ದೇಶದಲ್ಲಿ ಶೇ. 15ದಷ್ಟು ಮುಸ್ಲಿಂ ಅಲ್ಪಸಂಖ್ಯಾತರಿಗೆ ಹಲಾಲ್ ಆಹಾರ ಬೇಕು ಎಂಬ ಕಾರಣಕ್ಕೆ ಶೇ. 85ರಷ್ಟು ಇರುವ ಇತರ ಜನಾಂಗಗಳ ಬಹುಸಂಖ್ಯಾತರ ಮೇಲೆ ಹಲಾಲ್ ಉತ್ಪನ್ನಗಳನ್ನು ಹೇರಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ವಕೀಲ ವಿಭೋರ್‌ ಆನಂದ್‌ ಎಂಬುವರು ಹಲಾಲ್‌ ಉತ್ಪನ್ನಗಳು ಹಾಗೂ ಹಲಾಲ್‌ ಪ್ರಮಾಣೀಕರಣವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಲಾಲ್‌ ಉತ್ಪನ್ನಗಳನ್ನು ಮಾರಾಟ ಮಾಡುವುದು ಸಂವಿಧಾನದ 14 ಹಾಗೂ 21ನೇ ವಿಧಿಯ ಉಲ್ಲಂಘನೆಯಾಗಿದೆ. ದೇಶದಲ್ಲಿ 1974ರಲ್ಲಿ ಹಲಾಲ್‌ ಪ್ರಮಾಣೀಕರಣ ವ್ಯವಸ್ಥೆ ಆರಂಭವಾಯಿತು. ಮೊದಲಿಗೆ ಇದು ಮಾಂಸದ ಉತ್ಪನ್ನಗಳಿಗೆ ಸೀಮಿತವಾಗಿತ್ತು. ಆದರೆ ಇದೀಗ ಫಾರ್ಮಾಸ್ಯುಟಿಕಲ್ಸ್. ಕ್ಯಾಸ್ಮೆಟಿಕ್ಸ್, ಆರೋಗ್ಯ ಉತ್ಪನ್ನಗಳು, ವೈದ್ಯಕೀಯ ಉಪಕರಣಗಳಿಗೂ ಪ್ರಮಾಣೀಕರಣ ನೀಡಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೆ ಹಲಾಲ್‌ ಸ್ನೇಹಿ ಪ್ರವಾಸೋದ್ಯಮ, ಮೆಡಿಕಲ್‌ ಟೂರಿಸಂ, ಉಗ್ರಾಣ ಪ್ರಮಾಣೀಕರಣ, ಹಲಾಲ್‌ ರೆಸ್ಟೋರೆಂಟ್‌ಗಳು, ಹಲಾಲ್‌ ಟ್ರೇನಿಂಗ್‌ ಇತ್ಯಾದಿಗಳು ಕೂಡ ಆರಂಭವಾಗಿದೆ ಎಂದು ಆಪಾದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!