ಬ್ಯಾರಿಕೇಡ್‌ಗಳನ್ನು ಮುರಿದು ಸಂಸದೆಯ ನಿವಾಸಕ್ಕೆ ನುಗ್ಗಲು ಯತ್ನಿಸಿದ ಶಿವಸೇನೆ ಕಾರ್ಯಕರ್ತರು
ಮುಂಬೈ: ಶಿವಸೇನೆ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ಮಹಾರಾಷ್ಟ್ರ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದ್ದಾರೆ.
ಆದರೆ, ತಕ್ಷಣವೇ ಎಚ್ಚೆತ್ತ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು ಮತ್ತು ಶಿವಸೇನೆ ಕಾರ್ಯಕರ್ತರನ್ನು ತಡೆದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 9 ಗಂಟೆಗೆ ಉಪನಗರ ಬಾಂದ್ರಾದಲ್ಲಿರುವ ಶಿವಸೇನಾ ಅಧ್ಯಕ್ಷ, ಸಿಎಂ ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ರಾಣಾ ದಂಪತಿ ಶುಕ್ರವಾರ ಹೇಳಿದ್ದರು.
ರಾಣಾ ದಂಪತಿಯ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿವಸೇನೆ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆಯಿಂದಲೇ ‘ಮಾತೋಶ್ರೀ’ ಬಳಿ ಜಮಾಯಿಸಿದ್ದರು. ಮತ್ತೊಂದು ಗುಂಪು ರಾಣಾ ದಂಪತಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿತ್ತು




