February 4, 2026

ಶಿವಮೊಗ್ಗ: ಖಾಸಗಿ ಬಸ್ ಪಲ್ಟಿ, 31 ಪ್ರಯಾಣಿಕರಿಗೆ ಗಾಯ

0
image_editor_output_image-1523770086-1650712866329.jpg

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಜಿಲ್ಲೆಯ ಹೊಸನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಬಸ್ಸಿನಲ್ಲಿದ್ದ 31 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹೊಸನಗರ ತಾಲೂಕು ಕರಕೆ ಹಕ್ಲು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸನಗರ ಮತ್ತು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!