March 24, 2026

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಹೆಜ್ಜೇನು ದಾಳಿಗೆ ಕಾಫಿ ಮಂಡಳಿ ಅಧ್ಯಕ್ಷ ಮೃತ್ಯು

0
Screenshot_20220423-172056_Chrome.jpg

ಚಿಕ್ಕಮಗಳೂರು: ಕಾಫಿ ತೋಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ದಿಢೀರ್ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ (74) ಸಾವನ್ನಪ್ಪಿದ್ದಾರೆ.

ಶನಿವಾರ ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್‌ಗೆ ತಮ್ಮ ಕಾಫಿ ತೋಟಕ್ಕೆ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ ತೆರಳಿದ್ದರು. ತೋಟದಲ್ಲಿ ಸುತ್ತಾಡುತ್ತಿದ್ದಂತ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಅವರ ಮೇಲೆ ಹೆಜ್ಜೇನು ದಾಳಿ ನಡೆಸಿ ಕಚ್ಚಿದ ಪರಿಣಾಮ, ದಾಳಿಗೆ ಒಳಗಾದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸೋದಕ್ಕಾಗಿ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೇ ಮಾರ್ಗಮಧ್ಯೆ ಮೃತಪಟ್ಟಿರೋದಾಗಿ ತಿಳಿದು ಬಂದಿದೆ.

ಭೋಜೇಗೌಡರು ಸತತ 2ನೇ ಬಾರಿಗೆ ಕಾಫಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 1 ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿಯೂ ಎಂ.ಎಸ್. ಬೋಜೇಗೌಡ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!