February 3, 2026

ಕೊಯಂಬತ್ತೂರು-ಮುಂಬೈ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಮಹಿಳೆಗೆ ಗಾಯ

0
IMG-20220423-WA0176.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.  ಮೆಟ್ರೋ ರೈಲುಗಳ ಮೇಲೆ ಕಲ್ಲುತೂರಾಟ ನಡೆದ ವರದಿಗಳ ಬೆನ್ನಲ್ಲೇ ಬೈಯ್ಯಪ್ಪನ ಹಳ್ಳಿ ರೈಲು ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್ (ಕೊಯಂಬತ್ತೂರು-ಮುಂಬೈ) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರ ಪರಿಣಾಮ ರೈಲಿನಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರಿಗೆ ತಲೆಗೆ ಪೆಟ್ಟು ಬಿದ್ದಿದೆ. 

ಘಟನೆ ತಿಳಿಯುತ್ತಿದ್ದಂತೆಯೇ ಟಿಟಿಇ ಕಮರ್ಷಿಯಲ್ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡಿದ್ದು, ಗಾಯಗೊಂಡ ಪ್ರಯಾಣಿಕ ಮಹಿಳೆಗೆ ಚಿಕಿತ್ಸೆಯ ವ್ಯವಸ್ಥೆ ಮಾಡಲಾಯಿತು.

 
ಈ ಸಮಸ್ಯೆಗೆ ಪರಿಹಾರ ಕಷ್ಟವಾಗಿದ್ದು, ಕಲ್ಲು ತೂರಾಟದಂತಹ ಘಟನೆಯಿಂದ ರೈಲಿನಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಈ ಘಟನೆಗಳು ಅಪಾಯಕಾರಿಯಾಗಿದೆ ಎಂಬ ಅಭಿಪ್ರಾಯ ಮೂಡುತ್ತಿದೆ.

Leave a Reply

Your email address will not be published. Required fields are marked *

error: Content is protected !!