February 2, 2026

ಮಂಗಳೂರು: ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂ ನೀಡಿದ
ನಿರ್ವಾಹಕನಿಗೆ ಬಾಲಕಿ ತಾಯಿಯಿಂದ ಥಳಿತ

0
image_editor_output_image1395673663-1650780864099

ಮಂಗಳೂರು: ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೆ ಕರೆ ಮಾಡಿ ಮಾತನಾಡಿದ ಬಸ್ ನಿರ್ವಾಹಕನೋರ್ವನಿಗೆ ಬಾಲಕಿಯ ತಾಯಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಭಾರೀ ವೈರಲ್ ಆಗಿದೆ.

ಮಂಗಳೂರಿನಲ್ಲಿ 8ನೇ ತರಗತಿ ಓದುತ್ತಿರುವ ಬಾಲಕಿಯೋರ್ವಳು ಬಸ್‌ನಲ್ಲಿ ಸಂಚರಿಸುತ್ತಿದ್ದಾಗ ಮಾತನಾಡಿಸಿದ ಬಸ್ ನಿರ್ವಾಹಕ ಬಳಿಕ ಮೊಬೈಲ್ ನಂಬರ್‌ನ್ನು ಆಕೆಗೆ ನೀಡಿದ್ದಾನೆ. ಅಲ್ಲದೆ, ಬಾಲಕಿಯ ಮನೆಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡಿ ಮನೆಯಲ್ಲಿ ಯಾರ್‍ಯಾರಿದ್ದಾರೆ ಎಂದು ಕೇಳಿದ್ದಾನೆ. ಇದರಿಂದ ಕೆರಳಿದ ಬಾಲಕಿಯ ತಾಯಿ ನಿರ್ವಾಹಕನನ್ನು ಭೇಟಿಯಾಗಿ ಆತನಿಗೆ ಹಿಗ್ಗಾಮಗ್ಗ ಥಳಿಸಿದ್ದಾಳೆ. ಬಾಲಕಿ ಒಂದೇ ಬಾರಿ ಈ ಬಸ್‌ನಲ್ಲಿ ಸಂಚರಿಸಿದ್ದು, ಆಗಲೇ ಮೊಬೈಲ್ ನಂಬರ್‍ ನೀಡಿದ್ದ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!