ಪ್ರಧಾನಿ ಮೋದಿಯದ್ದು ಗೋಡ್ಸೆ ಸಿದ್ಧಾಂತ: ಕೆ.ಟಿ.ರಾಮರಾವ್
ಹೈದರಾಬಾದ್: ದೇಶಾದ್ಯಂತ ನಡೆಯುತ್ತಿರುವ ಕೋಮು ಗಲಭೆಗಳ ಬಗ್ಗೆ ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ ಅವರು, ಮೋದಿ, ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯ ಸಿದ್ಧಾಂತವನ್ನು ನೇರವಾಗಿ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮೋದಿ ಬಗ್ಗೆ ಜಿಗ್ನೇಶ್ ಮೇವಾನಿ ಹೇಳಿದ್ದನ್ನು ಪುನರುಚ್ಚರಿಸಿದ ಟಿಆರ್‌ಎಸ್ ನಾಯಕ, ಗುಜರಾತ್ ಶಾಸಕನನ್ನು ಅಸ್ಸಾಂ ಪೊಲೀಸರು ಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಧೈರ್ಯ ಇದ್ದರೆ ತಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದರು.




