March 24, 2026

ಪುತ್ತೂರು: ಬಸ್ಸಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಅನ್ಯ ಧರ್ಮದ ಯುವಕ ಪೊಲೀಸ್ ವಶಕ್ಕೆ

0
image_editor_output_image-2032733674-1650862274910

ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದು, ಆದರೂ ಆತನನ್ನು ತಡೆದ ಸಾರ್ವಜನಿಕರು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!