March 24, 2026

ಪಿಎಸ್‌ಐ ನೇಮಕಾತಿ ಹಗರಣ: ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಗೆ ನೋಟಿಸ್‌ ಜಾರಿ

0
Screenshot_2022-04-25-11-34-27-74_680d03679600f7af0b4c700c6b270fe7.jpg

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ವಿಶೇಷ ಘಟಕ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ರವಿವಾರ ನೋಟಿಸ್‌ ಜಾರಿ ಮಾಡಿದೆ. ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಎ. 25ರಂದು ಸೂಕ್ತ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

545 ಪಿಎಸ್‌ಐ (ಸಿವಿಲ್‌) ಅಕ್ರಮ ನೇಮಕಾತಿ ಹಗಣಕ್ಕೆ ಸಂಬಂಧಿಸಿದಂತೆ ತಾವು ತಮ್ಮ ಬಳಿಯಿರುವ ದಾಖಲಾತಿಗಳನ್ನು ಮಾಧ್ಯಮಗಳಿಗೆ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಹಾಗೂ ಗಂಭೀರವಾಗಿದ್ದು, ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಸಂಗ್ರಹಿಸಿ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ತಾವು ತಮ್ಮಲ್ಲಿರುವ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!