February 4, 2026

ಕೆರೆಗೆ ಈಜಾಡಲು ಹೋಗಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು

0
image_editor_output_image576846820-1650873241007.jpg

ಚಾಮರಾಜನಗರ: ಈಜಾಡಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಕಟ್ಟೆ ಕೆರೆಯಲ್ಲಿ ನಡೆದಿದೆ.

ತಾಲೂಕಿನ ಮೂಖಳ್ಳಿ ಕಾಲೋನಿ ಯುವಕರಾದ ಮಹೇಶ್(15), ವಿಶ್ವ(17) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಯುವಕರು.

ನಿನ್ನೆ ರಾತ್ರಿ ಸುರಿದ ಮಳೆ ನೀರಿಗೆ ಕೆರೆಯು ಒಂದೇ ದಿನದಲ್ಲಿ ಭರ್ತಿಯಾಗಿತ್ತು. ಈಜು ಬಾರದೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಈಜುಗಾರರ ಸಹಕಾರದಿಂದ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!