ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಸ್ಟೇಬಲ್ ಗಳ ನಡುವೆ ಫೈಟಿಂಗ್
ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯ ಸಂಚಾರಿ ಪೊಲೀಸ್ ಠಾಣೆಯೊಂದರಲ್ಲಿ ಕಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್‌ಗೆ ಹಲ್ಲೆ ನಡೆಸಿದ ಘಟನೆ ಬಗ್ಗೆ ವರದಿಯಾಗಿದೆ.
ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್ ಆಸ್ಪತ್ರೆಗೆ ತೆರಳಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್‌ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್‌ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ ಉಳಿದ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಈ ಹಿಂದೆಯೂ ಈ ಕಾನ್ಸ್‌ಸ್ಟೇಬಲ್ ಮೇಲೆ ಇಂತಹ ಅನೇಕ ಆರೋಪಗಳಿದ್ದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಮುಂದಾಗುತ್ತಿಲ್ಲ ಪೊಲೀಸ್ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಾಯಗೊಂಡಿರುವ ಹಿರಿಯ ಪೊಲೀಸ್ ಕಾನ್ಸ್‌ಸ್ಟೇಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಮಧ್ಯೆ ಅಶಿಸ್ತು ಹೆಚ್ಚಾಗುತ್ತಿರುವ ಬಗ್ಗೆ ಸುದ್ದಿಯಾಗುತ್ತಿದೆ.
ತಿಂಗಳ ಹಿಂದೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಮಧ್ಯೆಯ ಭಿನ್ನಾಭಿಪ್ರಾಯದಿಂದ ಇಡೀ ಠಾಣೆಯ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಕಾನೂನು ಕಾಯುವ ಪೊಲೀಸರೇ ಕಾನೂನು ರಕ್ಷಕರ ಕೇಂದ್ರದಲ್ಲೇ ಕಾಲರ್ ಪಟ್ಟಿ ಹಿಡಿದು ಹೊಡೆದಾಡಿಕೊಳ್ಳುವ ಮಟ್ಟಿಗೆ ಅಶಿಸ್ತು ಎದ್ದು ಕಾಣುತ್ತಿದೆ.
ಜನರಲ್ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯ ವರ್ತನೆಯನ್ನು ಪೊಲೀಸ್ ಕಮೀಷನರ್ ತಿದ್ದುವ ಕೆಲಸ ಮಾಡಿ. ಇಲಾಖೆ ಗೌರವಕ್ಕೆ ಚ್ಯುತಿ ಬರದಂತೆ ಕಾಪಾಡಬೇಕಿದೆ.





