ಕಾಸರಗೋಡು: ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು
ಕಾಸರಗೋಡು: ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಬಪ್ಪಾಯಿತೊಟ್ಟಿಯ ಮುಹಮ್ಮದ್ ಹಾರಿಸ್ (45) ಮೃತಪಟ್ಟವರು. ಬಾವಿಗೆ ಬಿದ್ದಿದ್ದ ಕೊಡಪಾನವನ್ನು ತೆಗೆಯಲು ಮನೆಯ ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




