ಉಪ್ಪಿನಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹೃದಯಾಘಾತಕ್ಕೆ ಬಲಿ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ಸಾಲ್ಯಾನ್ ಬೆಂಗೈ ಇಂದು ಮುಂಜಾನೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಹತ್ತು ಹಲವು ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಲ್ಲಿ ಓರ್ವರಾಗಿದ್ದ ಸುನಿಲ್ ಸಾಲಿಯಾನ್ ಅವರು ಗ್ರಾ.ಪಂ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಕೋವಿಡ್ ಕಾಲಘಟ್ಟದಲ್ಲಿ ರೋಗ ನಿಯಂತ್ರಣಕ್ಕಾಗಿ ಗ್ರಾಮ ವ್ಯಾಪ್ತಿಯಲ್ಲಿ ಉಚಿತ ಮಾಸ್ಕ್ ವಿತರಣೆ ಮತ್ತು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಮಾದರಿಯಾಗಿ ಅನುಷ್ಠಾನಿಸಿ ಎಲ್ಲರ ಪ್ರಶಂಸೆಗೆ ಒಳಗಾಗಿದ್ದರು ಎನ್ನಲಾಗಿದೆ.