February 1, 2026

ವಿಶ್ವದ ಪ್ರಮುಖ ಜಾಲತಾಣ ಟ್ವಿಟ್ಟರನ್ನು ಖರೀದಿಸಿದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್

0
Screenshot_2022-04-26-10-47-29-42_680d03679600f7af0b4c700c6b270fe7.jpg

ನ್ಯೂಯಾರ್ಕ್: ವಿಶ್ವದ ಪ್ರಮುಖ ಜಾಲತಾಣ ಟ್ವಿಟ್ಟರ್ ಕಂಪನಿಯನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರ್ ಕಂಪನಿ ಮುಖ್ಯಸ್ಥ ಹಾಗೂ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎನಿಸಿಕೊಂಡಿರುವ ಎಲಾನ್ ಮಸ್ಕ್ ಪ್ರತಿ ಷೇರಿಗೆ 54.20 ಡಾಲರ್ನಂತೆ 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್ ಖರೀದಿ ಮಾಡಲು ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ.

ಟ್ವಿಟರ್‌ನ ಪ್ರತಿ ಷೇರಿಗೆ 54.20 ಡಾಲರ್ ನೀಡಿ ಪೂರ್ತಿ ಷೇರು ಖರೀದಿಸುವ ಎಲಾನ್ ಮಸ್ಕ್ ಪ್ರಸ್ತಾಪವನ್ನು ಟ್ವಿಟರ್ ಆಡಳಿತ ಮಂಡಳಿ ಒಪ್ಪಿದ್ದು, ಅದರಂತೆ ಹಲವು ದಿನಗಳಿಂದ ನಡೆಯುತ್ತಿದ್ದ ವ್ಯಾಪಾರ ಒಪ್ಪಂದಕ್ಕೆ ಅಂತಿಮ ಮುದ್ರೆ ಬಿದ್ದಿದೆ.

ಎಲಾನ್ ಮಸ್ಕ್ ಅವರು ಟ್ವಿಟರ್‌ನಲ್ಲಿ ಶೇ 9.2ರಷ್ಟು ಷೇರು ಪಾಲು ಹೊಂದಿದ್ದರು. ನಂತರದಲ್ಲಿ ಪ್ರತಿ ಷೇರಿಗೆ 54.20 ಡಾಲರ್‌ (₹4149) ನಂತೆ ಪಾವತಿಸಿ, ಪೂರ್ತಿ ಪಾಲು ಖರೀದಿಗೆ ಇಂಗಿತ ವ್ಯಕ್ತಪಡಿಸಿದ್ದರು.

ಟ್ವಿಟರ್ ಖರೀದಿ ಪ್ರಸ್ತಾಪಕ್ಕೆ ಮಂಡಳಿ ಸಮ್ಮತಿ ಸೂಚಿಸುವುದರೊಂದಿಗೆ, ಕಂಪನಿ ಪೂರ್ತಿಯಾಗಿ ಇದೀಗ ಎಲಾನ್ ಮಸ್ಕ್ ಪಾಲಾಗಿದೆ.

Leave a Reply

Your email address will not be published. Required fields are marked *

error: Content is protected !!