ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್: ಕಿಡ್ನಿದಾನ ಮಾಡಿದರೆ 4 ಕೋಟಿ ರೂ. ನೀಡುವುದಾಗಿ ಜಾಹೀರಾತು: ಮೂವರು ವಿದೇಶಿ ಪ್ರಜೆಗಳ ಬಂಧನ
ಬೆಂಗಳೂರು: ನಗರದ ಕೆಲ ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿ ನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಕಿಡ್ನಿದಾನ ಮಾಡಿದರೆ 4 ಕೋಟಿ ರೂ. ನೀಡುವುದಾಗಿ ಜಾಹೀರಾತು ನೀಡಿ, ಅಮಾಯಕ ಸಾರ್ವಜನಿಕರ ಬಳಿ ಹಣ ಸುಲಿಗೆ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಆಗ್ನೇಯ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಮಿರಾಕಲ್ ಅಲಿಯಾಸ್ ಮಿಮಿ (28), ಸೋವ್ ಕಾಲಿನ್ಸ್ ನಿ (32) ಮತ್ತು ಫಾನಾ ಮೂಲದ ಮ್ಯಾಥ್ಯೂ ಇನೋಸೆಂಟ್ ಅಲಿಯಾಸ್ ಪಾಲ್ (38) ಬಂಧಿತರು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ಗಳು, ಲ್ಯಾಪ್‌ಟಾಪ್ ಹಾಗೂ ಇತರೆ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.
ಮೂವರು ಇತ್ತೀಚೆಗೆ ಜಯನಗರದ ಸಾಗರ್ ಆಸ್ಪತ್ರೆ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಕಿಡ್ನಿ ಕಸಿ ಮಾಡಲಾಗುತ್ತದೆ. ಕಿಡ್ನಿ ದಾನ ಮಾಡುವವರು ಹಾಗೂ ಕಿಡ್ನಿ ಅಗತ್ಯವಿದ್ದವರು ಸಂಪರ್ಕಿಸುವಂತೆ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಮಹೇಂದ್ರ ಕುಮಾರ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.




