March 19, 2026

ಮಹಿಳೆಗೆ ಅಶ್ಲೀಲ ಸಂದೇಶ ರವಾನೆ: 6 ವರ್ಷಗಳ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ

0
image_editor_output_image-1647010936-1650963894760.jpg

ಕಾಪು: ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರು ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಮೀರಕೋರನ ಹಳ್ಳಿಯ ನಿವಾಸಿ ನಾಗನಗೌಡ (39) ಎಂದು ಗುರುತಿಸಲಗಿದೆ.

ಏಪ್ರಿಲ್ 24 ರಂದು ಆತನ ಹುಟ್ಟೂರಾದ ಮೀರಕೋರನ ಹಳ್ಳಿಯಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯು 2014 ರಲ್ಲಿ ಕಾಪು ತಾಲೂಕಿನ ಮಣಿಪುರ ಗ್ರಾಮದ ಮಹಿಳೆಯ ಮೊಬೈಲ್ ಫೋನ್‌ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕೆಯ ಪೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಕರೆಗಳನ್ನು ಸಹ ಮಾಡಿದ್ದಾನೆ. ಆರೋಪಿ ವಿರುದ್ಧ ಮಹಿಳೆಯ ಪತಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!