ಬಂಟ್ವಾಳ: ಸಾಲದ ಟೆನ್ಶನ್- ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆಯಲ್ಲಿ ಮೃತಪಟ್ಟ ದುರ್ದೈವಿ.
ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ ಮಾಡಿಕೊಂಡಿದ್ದ. ಆದರೆ ಅದನ್ನು ತೀರಿಸಲು ಸಾಧ್ಯವಾಗದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




