February 3, 2026

ಸುಳ್ಳು ಸುದ್ದಿ ಪ್ರಸಾರ ಆರೋಪ: 16 ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ

0
download-2.jpeg

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್‌ಬುಕ್‌ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ.

ಇದರಲ್ಲಿ ನೆರೆಯ ಪಾಕಿಸ್ತಾನದಿಂದ ನಿರ್ವಹಿಸಲಾಗುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳೂ ಸೇರಿವೆ. ನಿರ್ಬಂಧಕ್ಕೆ ಒಳಗಾದ ಫೇಸ್‌ಬುಕ್ ಖಾತೆ ಮತ್ತು ಯೂಟ್ಯೂಬ್ ಚಾನೆಲ್‌ಗಳು ಒಟ್ಟಾರೆ 68 ಕೋಟಿ ನೋಡುಗರನ್ನು ಹೊಂದಿದ್ದವು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!