February 3, 2026

ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣ: ತೇಜಸ್ವಿ ಸೂರ್ಯ ಗೆ ತನಿಖೆಗೆ ಹಾಜರಾಗಲು ಆದೇಶ

0
PTI03_17_2021_000046A_1620394581227_1620394599112.jpg

ನವದೆಹಲಿ: ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಕೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಲಿಖಿತ ಸಂವಹನದ ಮೂಲಕ ತನಿಖೆಗೆ ಹಾಜರಾಗುವಂತೆ ಸೂರ್ಯ ಅವರನ್ನು ಕೇಳಲಾಗಿದ್ದು, ಅವರು ತಮ್ಮ ಸಹಕಾರದ ಭರವಸೆ ನೀಡಿದ್ದು, ತನಿಖೆಗೆ ಹಾಜರಾಗುವುದಾಗಿ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ದೆಹಲಿಯಿಂದ ಬಂಧಿಸಲಾಗಿದ್ದು, ಇವರನ್ನೊಳಗೊಂಡಂತೆ ಒಟ್ಟು 26 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!